ಕಾನೂನು ಸುದ್ದಿ

ಕ್ರಿಮಿನಲ್ ಅಪರಾಧಗಳಿಗೆ ಹೊಸ ಕಾನೂನುಗಳು ಜುಲೈ 1 ರಿಂದ ಜಾರಿ

Share It

ನವದೆಹಲಿ: ಕ್ರಿಮಿನಲ್ ಅಪರಾಧಗಳಿಗೆ ಹೊಸ ಕಾನೂನುಗಳು ಇಂದಿನಿಂದ ಜಾರಿಯಾಗಲಿದ್ದು ದೇಶದ ಕ್ರಿಮಿನಲ್ ನ್ಯಾಯ ವ್ಯವಸ್ಥಯಲ್ಲಿ ಬದಲಾವಣೆ ತರುವ ಹೊಸ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳು ಜುಲೈ 1 ಜಾರಿಗೊಳ್ಳಲಿವೆ.

ಭಾರತೀಯ ನ್ಯಾಯ ಸಂಹಿತೆ 203, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ 2023 ಹೊಸದಾಗಿ ಅನುಷ್ಠಾನಗೊಳ್ಳಲಿರುವ ಹೊಸ ಕಾಯ್ದೆಗಳು. 163 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ದಂಡ ಸಂಹಿತೆ, 126 ವರ್ಷಗಳ ಹಿಂದಿನ ಅಪರಾಧ ದಂಡಪ್ರಮಕ್ರಿಯಾ ಸಂಹಿತೆ ಮತ್ತು 151 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ಸಾಕ್ಷ್ಯ ಕಾಯ್ದೆಯ ಬದಲಿಗೆ ಈ ಮೂರು ಹೊಸ ಕಾನೂನುಗಳು ಜಾರಿಗೆ ಬರಲಿವೆ.

ಜೀರೋ ಎಫ್ಐಆರ್, ಆನ್‌ಲೈನ್ ಮೂಲಕ ದೂರು ಸಲ್ಲಿಕೆಗೆ ಅವಕಾಶ, ಎಸ್ಎಂಎಸ್ ಮೂಲಕ ಸಮನ್ಸ್ ಕಳುಹಿಸುವುದು ಮತ್ತು ಹೇಯವಾದ ಅಪರಾಧಗಳು ಘಟಿಸಿದಾಗ ಆ ಸ್ಥಳದ ವಿಡಿಯೋ ಚಿತ್ರೀಕರಣವನ್ನು ಕಡ್ಡಾಯಗೊಳಿಸುವಂತಹ ನಿಬಂಧನೆಗಳನ್ನು ಒಳಗೊಂಡಿರುವ ಹೊಸ ಕಾನೂನುಗಳು ಆಧುನಿಕ ನ್ಯಾಯ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ವಿಶ್ಲೇಷಿಸಲಾಗಿದೆ.


Share It

You cannot copy content of this page