ರಾಜಕೀಯ ಸುದ್ದಿ

ಸೋಲಿನ ಹೊಣೆ ಹೊತ್ತು ಕ್ಷಮೆಯಾಚಿಸಿದ ರಿಷಿ ಸುನಾಕ್

Share It

ಬ್ರಿಟನ್‌ ಸಂಸತ್‌ ಚುನಾವಣೆಯಲ್ಲಿ ಕನ್ಸರ್ವೇಟಿವ್‌ ಪಕ್ಷಕ್ಕೆ ಹೀನಾಯ ಸೋಲಾಗಿದ್ದು, ಪ್ರಧಾನಿ ರಿಷಿ ಸುನಾಕ್‌ ಕ್ಷಮೆ ಕೋರಿದ್ದಾರೆ.

ಸಾರ್ವತ್ರಿಕ ಚುನಾವಣೆಯಲ್ಲಿ ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಕ್ಷವು 650 ಸ್ಥಾನಗಳಲ್ಲಿ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಿ ಗೆದ್ದ ನಂತರ ರಿಷಿ ಸುನಕ್ ಗೆ ತೀವ್ರ ಮುಖಭಂಗವಾಗಿತ್ತು. ಹೀಗಾಗಿ ಸೋಲಿನ ನಂತರ ರಿಷಿ ಸುನಕ್ ಕ್ಷಮೆಯಾಚಿಸಿದ್ದಾರೆ. ಅಲ್ಲದೇ, ಅವರು ಸೋಲಿನ ಹೊಣೆಯನ್ನೂ ಹೊತ್ತುಕೊಂಡಿದ್ದಾರೆ. ಈ ಸೋಲಿನ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಲೇಬರ್ ಪಕ್ಷವು ಈ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದಿದೆ ಮತ್ತು ಅವರ ವಿಜಯಕ್ಕಾಗಿ ಅಭಿನಂದಿಸಲು ನಾನು ಸರ್ ಕೀರ್ ಸ್ಟಾರ್ಮರ್ ರನ್ನು ಕರೆದಿದ್ದೇನೆ. ಕನ್ಸರ್ವೇಟಿವ್‌ ಪಕ್ಷ ಸೋತರೂ ರಿಚ್ಮಂಡ್ ನಾರ್ತಲರ್ಟನ್ ಕ್ಷೇತ್ರದಿಂದ ರಿಷಿ ಸುನಕ್‌ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ.

ಲೇಬರ್‌ ಪಾರ್ಟಿ ಗೆದ್ದ ಬನಂತರ ಮಾತನಾಡಿರುವ ಪ್ರಧಾನಿ ಅಭ್ಯರ್ಥಿ ಕೀರ್ ಸ್ಟಾರ್ಮರ್, ಅವ್ಯವಸ್ಥೆಯನ್ನು ಕೊನೆಗೊಳಿಸುತ್ತೇವೆ ಎಂದು ನಾವು ಭರವಸೆ ನೀಡಿದ್ದೇವೆ ಮತ್ತು ಅದನ್ನೇ ನಾವು ಮಾಡುತ್ತೇವೆ. ಇನ್ನು ಮುಂದೆ ದೇಶದ ಬದಲಾವಣೆ ಪ್ರಾರಂಭವಾಗಲಿದೆ. ನಮ್ಮ ದೇಶವನ್ನು ಮತ್ತೆ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸಂಸತ್ತಿನ 650 ಸ್ಥಾನಗಳಿಗೆ ಗುರುವಾರ ಮತಪತ್ರಗಳ ಮೂಲಕ ಚುನಾವಣೆ ನಡೆದಿದ್ದು ಮತ ಎಣಿಕೆ ನಡೆಯುತ್ತಿದೆ. ಚುನಾವಣಾ ಸಮೀಕ್ಷೆಗಳು 13 ವರ್ಷಗಳಿಂದ ಅಧಿಕಾರದಲ್ಲಿರುವ ಕನ್ಸರ್ವೇಟಿವ್‌ ಪಕ್ಷಕ್ಕೆ ಹೀನಾಯ ಸೋಲಾಗಬಹುದು ಎಂದು ಮೊದಲೇ ಭವಿಷ್ಯ ನುಡಿಯಲಾಗಿತ್ತು. 650 ಸದಸ್ಯರ ಹೌಸ್ ಆಫ್ ಕಾಮನ್ಸ್‌ನಲ್ಲಿ ಬಹುಮತಕ್ಕೆ 326 ಸ್ಥಾನಗಳನ್ನು ಗೆಲ್ಲುವ ಅಗತ್ಯವಿದೆ. ಚುನಾವಣೋತ್ತರ ಸಮೀಕ್ಷೆಗಳು ಲೇಬರ್‌ ಪಕ್ಷ 410 ಸ್ಥಾನಗಳನ್ನು ಗೆಲ್ಲಬಹುದು ಎಂದು ಭವಿಷ್ಯ ನುಡಿದಿದ್ದವು. ಆರು ತಿಂಗಳು ಅಧಿಕಾರವಧಿ ಇದ್ದರೂ ಅವಧಿಪೂರ್ವ ಚುನಾವಣೆಗೆ ಹೋಗುವ ಮೂಲಕ ರಿಷಿ ಸುನಕ್ ಅಚ್ಚರಿ ನಿರ್ಧಾರ ಕೈಗೊಂಡಿದ್ದರು. ಈಗ ಇಂಗ್ಲೆಂಡ್ ಜನರ ಕ್ಷಮೆ ಕೋರಿದ್ದಾರೆ.


Share It

You cannot copy content of this page